Ilkal :ಶುಭ ಶುಕ್ರವಾರದಂದು ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಪದಗ್ರಹಣ

 


Ilkal : ಶುಭ ಶುಕ್ರವಾರದಂದು ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಪದಗ್ರಹಣ

ಹೌದು ಬಾಗಲಕೋಟ ಜಿಲ್ಲೆಯ ಇಲಕಲ್ಲ ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ಆಗಸ್ಟ್ 20ರಂದು ತೆರೆ ಬಿದ್ದಿದು ಅದರಲ್ಲಿ ನಗರಸಭೆಯ ನೂತನ ಅಧ್ಯಕ್ಷರಾಗಿ ಶ್ರೀಮತಿ ಸುಧಾರಾಣಿ ಮುರುಗೇಶ್ ಸಂಗಮ್, ಉಪಾಧ್ಯಕ್ಷರಾಗಿ ಶ್ರೀಮತಿ ಕಾಳಮ್ಮ ವಿರೂಪಾಕ್ಷಪ್ಪ ಜಕ್ಕಾವರು ಆಯ್ಕೆಯಾಗಿದ್ದರು ಅದರಂತೆ ಇಂದು ಅಗಸ್ಟ್ 23 ಶುಭ ಶುಕ್ರವಾರದಂದು ಶುಭಮೂರ್ತದಲ್ಲಿ ನಗರಸಭೆ ಕಚೇರಿಯಲ್ಲಿ ಪೂಜಿ ಸಲ್ಲಿಸಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಅಧಿಕಾರ ವಹಿಸಿಕೊಂಡರು ಇದೇ ಸಂದರ್ಭದಲ್ಲಿ ಮಾತನಾಡಿದ ನೂತನ ಅಧ್ಯಕ್ಷರಾದ ಶ್ರೀಮತಿ ಸುಧಾರಾಣಿ ಮುರುಗೇಶ್ ಸಂಗಮ ಅವರು ಕ್ಷೇತ್ರದ ಶಾಸಕರು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ವಿಜಯಾನಂದ್ ಕಾಶಪ್ಪನವರ ಅವರು ನನ್ನ ಮೇಲೆ ನಂಬಿಕೆ ಇಟ್ಟು ದೊಡ್ಡ ಜವಾಬ್ದಾರಿಯನ್ನು ಕೊಟ್ಟಿದ್ದಾರೆ ಅದರಂತೆ ಅವರಿಗೆ ಕೃತಜ್ಞತೆ ತಿಳಿಸುತ್ತೇನೆ ಹಾಗೂ ಅವರ ಸಲಹೆ ಸೂಚನೆಗಳನ್ನು ತೆಗೆದುಕೊಂಡು ಹಾಗೆ ಎಲ್ಲ ನಗರಸಭೆಯ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಇಲಕಲ್ಲ ನಗರವನ್ನು ಮಾಧುರಿ ನಗರವನ್ನಾಗಿ ಮಾಡಲು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆಂದು ವಿಶ್ವಾಸ ವ್ಯಕ್ತಪಡಿಸಿದರು,



ಇದೇ ಸಂದರ್ಭದಲ್ಲಿ ಇಲಕಲ್ಲ ನಗರದ ಗಣ್ಯರು ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಸೇರಿ ಇಲಕಲ್ಲ ನಗರದ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಸನ್ಮಾನಿಸಿ ಶುಭಾಶಯ ತಿಳಿಸಿದರು



Post a Comment

Previous Post Next Post

Contact Form