ಗೇಟ್ ಪ್ರಕರಣಕ್ಕೆ ಯಾರು ಹೊಣೆ ಎಂಬ ಪ್ರಶ್ನೆಗೆ ಸಿಎಂ ಪ್ರತಿಕ್ರಿಯೆ
70 ವರ್ಷದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಗೇಟ್ ಮುರಿದಿದೆ. ನೀರಿನ ರಭಸಕ್ಕೆ ಗೇಟ್ ಕೊಚ್ಚಿ ಹೋಗಿದೆ. ಗೇಟ್ ಈಗಾಗಲೇ ತಯಾರು ಮಾಡಲಾಗುತ್ತಿದೆ ನಾಳೆಯಿಂದ ಗೇಟ್ ಅಳವಡಿಕೆ ಕಾರ್ಯಕ್ಕೆ ಚಾಲನೆ ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಈ ಹಿಂದೆ ಗೇಟ್ ಮುರಿದಿದೆ ಎಂಬ ಆರೋಪ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿದ ಅವರು, ಇತಿಹಾಸದಲ್ಲಿ ಈ ಹಿಂದೆ ಯಾವತ್ತೂ ಗೇಟ್ ಮುರಿದಿಲ್ಲ. ಸದ್ಯಕ್ಕೆ ನೀರು ನಿಲ್ಲಿಸುವುದೇ ನಮಗೆ ಸವಾಲು ಎಂದರು.
ಗೇಟ್ ಕೊಚ್ಚಿ ಹೋಗಿರುವ ಪ್ರಕರಣಕ್ಕೆ ಯಾರನ್ನು ಹೊಣೆ ಮಾಡುತ್ತೀರಿ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನೀರು ನಿಲ್ಲಿಸೋದೇ ಒಂದೇ ನಮ್ಮ ಗುರಿ, ಉಳಿದಿದ್ದೆಲ್ಲ ಆ ಮೇಲೆ ಎಂದು ಹೇಳಿದರು.
ಮೊದಲನೇ ಬೆಳೆಗೆ ಯಾವುದೇ ತೊಂದರೆ ಇಲ್ಲ. ಗೇಟ್ ಕೂಡಿಸಿದ ಬಳಿಕವೂ ನಮ್ಮ ಬಳಿ 63 ಟಿಎಂಸಿ ನೀರು ಉಳಿಯುತ್ತದೆ. ರೈತರು ಯಾವುದೇ ಕಾರಣಕ್ಕೂ ಆತಂಕ ಪಡುವ ಅಗತ್ಯವಿಲ್ಲ ಮೊದಲನೇ ಬೆಳೆಗೆ ಬೇಕಾಗುಷ್ಟು ನೀರು ಇದೆ. ಮೊದಲ ಬೆಳೆಗೆ ಬೇಕಾದಷ್ಟು ನೀರು ಪೂರೈಸುತ್ತೇವೆ. ಆಂಧ್ರ, ತೆಲಂಗಾಣ ರಾಜ್ಯದ ನಾಯಕರು ನಾವು ಜಂಟಿಯಾಗಿದ್ದೇವೆ. ಜಲಾಶಯ ವಿಚಾರದಲ್ಲಿ ರಾಜಕೀಯ ಮಾಡುವುದಿಲ್ಲ ಎಂದರು.
Tags
Political