Ilkal :ಇಲಕಲ್ಲ ನಗರಸಭೆಯಿಂದ ಸಾರ್ವಜನಿಕ ಪ್ರಕಟಣೆ

 

ಇಲಕಲ್ಲ ನಗರಸಭೆಯಿಂದ ಸಾರ್ವಜನಿಕ ಪ್ರಕಟಣೆ

2024-253 ಸಾಲಿನ ఆస్తి ತೆರಿಗೆ ಪಾವತಿಗೆ ನೀಡಲಾಗುತ್ತಿರುವ ಶೇಕಡಾ 5 ರ ರಿಯಾಯಿತಿ ಅವಧಿಯನ್ನು ವಿಸ್ತರಿಸುವ ಕುರಿತು.

1) ಸರ್ಕಾರದ ಆದೇಶ ಸಂಖ್ಯೆ :ನಅಇ 119 ಜಿಇಎಲ್ 2024 2: 03.07.2024

2)ಪೌರಾಡಳಿತ ನಿರ್ದೇಶನಾಲಯದ ಏಕ ಕಡತ ಸಂಖ್ಯೆ : DMA/DEV/TAX/1/2024


👆ಮೇಲೆ ಇರುವ ಕ್ರಮ ಸಂಖ್ಯೆ: (1)ರಲ್ಲಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಯನ್ನು ಪರಿಣಾಮಕಾರಿಯಾಗಿ ಹೆಚ್ಚಿಸಲು ಹಾಗೂ ಸ್ವಯಂ ತೆರಿಗೆ ಪಾವತಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಪೌರಸಭೆಗಳ ಅಧಿನಿಯಮ 1964ರ ಕಲಂ 105(1)ರನ್ವಯ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ (ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳ) ಹಾಗೂ ಕರ್ನಾಟಕ ಮಹಾನಗರ ಪಾಲಿಕೆಗಳ ಅಧಿನಿಯಮ, 1976ರ ಕಲಂ 112(ಎ)ರನ್ವಯ ಮಹಾನಗರ ಪಾಲಿಕೆಗಳಲ್ಲಿ ಆರ್ಥಿಕ ವರ್ಷದ ಪ್ರಾರಂಭದ 30 ದಿನಗಳಲ್ಲಿ ಪೂರ್ಣ ಪ್ರಮಾಣದ ಆಸ್ತಿ ತೆರಿಗೆ ಪಾವತಿ ಮಾಡಿದಲ್ಲಿ ಶೇಕಡಾ 5ರಷ್ಟು ರಿಯಾಯಿತಿ ನೀಡಲು ಕಲ್ಪಿಸಿರುವ ಅವಕಾಶದ ಅವಧಿಯನ್ನು ದಿನಾಂಕ: 31.07.2024ರವರೆಗೆ ವಿಸ್ತರಿಸಿ ಆದೇಶಿಸಲಾಗಿದೆ.



ಮೇಲೆ ಓದಲಾದ ಕ್ರಮ ಸಂಖ್ಯೆ:(2)ರಲ್ಲಿ ಮೇಲ್ಕಂಡ ಆದೇಶದಂತೆ ಶೇಕಡಾ 5ರ ರಿಯಾಯಿತಿ ನೀಡಲು ಕಲ್ಪಿಸಿರುವ ಅವಕಾಶದ ಅವಧಿಯನ್ನು ವಿಸ್ತರಿಸುವಂತೆ ಪೌರಾಡಳಿತ ನಿರ್ದೇಶಕರು ಕೋರಿಕೆ ಸಲ್ಲಿಸಿರುತ್ತಾರೆ.


ಸದರಿ ಮನವಿಯನ್ನು ಪರಿಶೀಲಿಸಿ, ಸರ್ಕಾರವು ಈ ಕೆಳಕಂಡಂತೆ ಆದೇಶಿಸಿದೆ. ಸರ್ಕಾರದ ಆದೇಶ ಸಂಖ್ಯೆ:ನ ಅ ಇ 119 ಜಿ ಇ ಎಲ್ 2024(2) ಬೆಂಗಳೂರು ದಿನಾಂಕ:28.08.2024ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಯನ್ನು ಪರಿಣಾಮಕಾರಿಯಾಗಿ ಹೆಚ್ಚಿಸಲು ಹಾಗೂ ಸ್ವಯಂ ತೆರಿಗೆ ಪಾವತಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಪೌರಸಭೆಗಳ ಅಧಿನಿಯಮ 1964ರ ಕಲಂ 105(1)ರನ್ವಯ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ (ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿ ಹಾಗೂ ಕರ್ನಾಟಕ ಮಹಾನಗರ ಪಾಲಿಕೆಗಳ ಅಧಿನಿಯಮ, 1976ರ ಕಲಂ 112(ಎ)ರನ್ವಯ ಮಹಾನಗರ ಪಾಲಿಕೆಗಳಲ್ಲಿ ಆರ್ಥಿಕ ವರ್ಷದ ಪ್ರಾರಂಭದ 30 ದಿನಗಳಲ್ಲಿ ಪೂರ್ಣ ಪ್ರಮಾಣದ ಆಸ್ತಿ ತೆರಿಗೆ ಪಾವತಿ ಮಾಡಿದಲ್ಲಿ ಶೇಕಡಾ 5ರಷ್ಟು ರಿಯಾಯಿತಿ ನೀಡಲು ಕಲ್ಪಿಸಿರುವ ಅವಕಾಶದ ಅವಧಿಯನ್ನು ದಿನಾಂಕ:14.09.2024ರವರೆಗೆ ವಿಸ್ತರಿಸಿ ಆದೇಶಿಸಿದೆ 

ಆದ್ದರಿಂದ ಸಾರ್ವಜನಿಕರು ಈ ರಿಯಾಯಿತಿಯ ಸದುಪಯೋಗ ಪಡೆದುಕೊಳ್ಳಬೇಕೆಂದು ಇಲಕಲ್ಲ ನಗರಸಭೆ ಅಧ್ಯಕ್ಷ ಶ್ರೀಮತಿ ಸುಧಾರಾಣಿ ಮುರುಗೇಶ್ ಸಂಗಮ, ಮತ್ತು ಉಪಾಧ್ಯಕ್ಷರಾದ ಶ್ರೀಮತಿ ಕಾಳಮ್ಮ ವಿರುಪಾಕ್ಷಪ್ಪ ಜಕ್ಕಾ, ಹಾಗೂ ನಗರಸಭೆಯ ಪೌರಾಯುಕ್ತಾರಾದ ಶ್ರೀನಿವಾಸ್ ಜಾಧವ್ ಅವರು ವಿನಂತಿಸಿದ್ದಾರೆ

Post a Comment

Previous Post Next Post

Contact Form