ಇಳಕಲ್ :- ನನ್ನ ಮತಕ್ಷೇತ್ರದ ಜನರಿಗೆ ಮತ್ತು ಜಾನುವಾರುಗಳಿಗೆ ನೀರಿನ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ ಶಾಸಕ : ವಿಜಯಾನಂದ್ ಎಸ್ ಕಾಶಪ್ಪನವರ
ಹೌದು ಇಳಕಲ್ ನಗರದ ಶಾಸಕರ ಗೃಹ ಕಚೇರಿಯಲ್ಲಿ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಹುನಗುಂದ ಮತಕ್ಷೇತ್ರದ ಶಾಸಕರಾದ ವಿಜಯಾನಂದ ಎಸ್ ಕಾಶಪ್ಪನವರ ಅವರು ಹುನಗುಂದ ಪಟ್ಟಣ ಮತ್ತು ಇಳಕಲ್ ನಗರ ಹಾಗೂ ಅವಳಿ ತಾಲೂಕಿನ ಗ್ರಾಮೀಣ ಪ್ರದೇಶಗಳ ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಅಧಿಕಾರಿಗಳ ಸಭೆ ನಡೆಸಿ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು
ಈ ಸಂದರ್ಭದಲ್ಲಿ ಇಳಕಲ್ ನಗರಸಭೆ ಅಧ್ಯಕ್ಷರು, ಸದಸ್ಯರು ಹಾಗೂ ಹುನಗುಂದ ಪುರಸಭೆ ಅಧ್ಯಕ್ಷರು ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.